ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025 ರ ಕರ್ನಾಟಕ ದ್ವಿತೀಯ ಪಿಯುಸಿ (PUC) ಫಲಿತಾಂಶವನ್ನು ಮುಂದಿನ ವಾರ ಪ್ರಕಟಿಸುವ ಸಾಧ್ಯತೆ ಇದೆ. ಫಲಿತಾಂಶವನ್ನು ಏಪ್ರಿಲ್ ಮೊದಲ ಅಥವಾ ಎರಡನೇ ವಾರದಲ್ಲಿ ಘೋಷಿಸುವ ನಿರೀಕ್ಷೆಯಿದೆ
ಕಳೆದ ವರ್ಷ, ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 10ರಂದು ಪ್ರಕಟವಾಗಿತ್ತು. ಈ ವರ್ಷ, ಮಾರ್ಚ್ 1ರಿಂದ ಮಾರ್ಚ್ 20ರ ವರೆಗೆ ನಡೆದ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್ kseab.karnataka.gov.in ನಲ್ಲಿ ಪರಿಶೀಲಿಸಬಹುದು.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವ ವಿಧಾನ
ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
ಮುಖಪುಟದಲ್ಲಿ ಲಭ್ಯವಿರುವ ‘ದ್ವಿತೀಯ ಪಿಯುಸಿ ಫಲಿತಾಂಶ’ ಲಿಂಕ್ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ.
ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ, ನಂತರ ‘ಸಬ್ಮಿಟ್’ ಬಟನ್ ಕ್ಲಿಕ್ ಮಾಡಿ.
ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.