2023 ರ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನ ಹಂತ ಹಂತವಾಗಿ ಜಾರಿಗೆ ತಂದಿದೆ. ಒಂದು ಹೊತ್ತು ಊಟಕ್ಕಾಗಿ ಕಷ್ಟ ಪಡುವ ಅದೆಷ್ಟು ಕುಟುಂಬಗಳಿಗೆ ಗೃಹ ಲಕ್ಷ್ಮಿ ಯೋಜನೆ ಸಾಕಷ್ಟು ಸಹಕಾರಿಯಾಗಿದೆ.
ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಹಲವು ಯಶೋಗಾಥೆಗಳಿಗೆ ಸಾಕ್ಷಿಯಾಗಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಮನೆಯ ಯಜಮಾನಿಯರಿಗೆ 2000 ರೂಪಾಯಿ ಹಣದಿಂದ ಹಲವರು ತಮ್ಮ ಬದುಕನ್ನ ಬದಲಾಹಿಸಿಕೊಂಡಿದ್ದಾರೆ.
ಕೆಲ ತಿಂಗಳು ಗೃಹ ಲಕ್ಷ್ಮಿ ಹಣ ಸರಿಯಾದ ಸಮಯಕ್ಕೆ ಬಿಡುಗಡೆಯಾಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಮಹಿಳೆಯರು ಆಕ್ರೋಶ ವ್ಯಕ್ತಪಸಿದ್ದರು. ಅಲ್ಲದೇ ಗೃಹಲಕ್ಷ್ಮಿ ಹಣವನ್ನ ಆದಷ್ಟು ಬೇಗ ಬಿಡುಗಡೆ ಮಾಡಿ ಎಂದು ಪಟ್ಟು ಹಿಡಿದಿದ್ದರು. ಇದೀಗ ಜನವರಿ ತಿಂಗಳ ಗೃಹ ಲಕ್ಷ್ಮಿ ಹಣ ಯುಗಾದಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದ್ದು, ಇದೀಗ ಫೆಬ್ರವರಿ ತಿಂಗಳ ಹಣ ಬಿಡುಗಡೆ ಯಾವಾಗ ಎಂದು ಗೃಹಲಕ್ಷ್ಮಿ ಯೋಜನಯ ಮಹಿಳೆ ಫಲಾನುಭವಿಗಳು ಪ್ರಶ್ನಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ 16 ಹಾಗೂ 17 ಕಂತಿನ ಹಣವನ್ನ ಈಗಾಗಲೇ ಸರ್ಕಾರ ಮಹಿಳಾ ಫಲಾನುಭವಿಗಳ ಖಾತೆಗೆ ಹಾಕಿದೆ. ಇನ್ನೂ ಫೆಬ್ರವರಿ ತಿಂಗಳ ಹಣ ಆದಷ್ಟು ಬೇಗ ಮಹಿಳೆಯರ ಖಾತೆಗೆ ಹಾಕಲಾಗುವುದು ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟಪಡಿಸಿದ್ದರು. ಸದ್ಯ ಒನ್ ಇಂಡಿಯಾಗೆ ಬಂದ ಮಾಹಿತಿಯ ಪ್ರಕಾರ ಫೆಬ್ರವರಿ ತಿಂಗಳ ಹಣ ಏಪ್ರಿಲ್ 25 ರ ಒಳಗೆ ಮಹಿಳಾ ಫಲಾನುಭವಿಗಳ ಖಾತೆಗೆ ಬರಲಿದೆ ಎಂದು ತಿಳಿದು ಬಂದಿದೆ.
ಮಾರ್ಚ್ ತಿಂಗಳ ಹಣ ಸದ್ಯಕ್ಕಿಲ್ಲ
ಇನ್ನೂ ಫೆಬ್ರವರಿ ತಿಂಗಳ ಹಣ ಏಪ್ರಿಲ್ ಕೊನೆಯ ವಾರದಲ್ಲಿ ಮಹಿಳಾ ಫಲಾನುಭವಿಗಳ ಖಾತೆಗೆ ಬರಲಿದ್ದು, ಇದೀಗ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣಕ್ಕಾಗಿ ಮಹಿಳೆಯರು ಕಾಯಬೇಕಾಗಿದೆ. ಗೃಹಲಕ್ಷ್ಮೀ ಯೋಜನೆಯ ಮಾರ್ಚ್ ತಿಂಗಳ ಹಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆ ಮಹಿಳೆಯರ ಖಾತೆಗೆ ಜಮಾ ಆಗೋದಿಲ್ಲ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಾಗುತ್ತದೆ ಎಂದು ತಿಳಿದು ಬಂದಿದೆ.