Gruhalakshmi yojana : ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಹಿತಿ? ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi yojana: ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು.ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ನವೆಂಬರ್‌, ಡಿಸೆಂಬರ್‌ ತಿಂಗಳ ಹಣ ಕ್ಲೀಯರ್‌ ಆಗಿದೆ. ಜನವರಿ, ಫೆಬ್ರವರಿ ಸದ್ಯದಲ್ಲೇ ಕ್ಲಿಯರ್‌ ಆಗಲಿದೆ. ಹತ್ತ-ಹದಿನೈದು ದಿನ ಹೆಚ್ಚುಕಡಿಮೆ ಆಗಬಹುದೇನೋ ವಿನಃ ಯಾವುದೇ ಕಾರಣಕ್ಕೂ ಕ್ಲಿಯರ್‌ ಆಗದೇ ಉಳಿಯುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೇ, ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ. ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್‌ ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು. ಆದರೆ, ಈಗ ಬಹುದೊಡ್ಡ ಗಾತ್ರದ ಬಜೆಟ್‌ನ್ನು ಒಳಗೊಂಡಂತಹ ಇಲಾಖೆಯಾಗಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆ ಬಂದಿರುವುದರಿಂದ ಒಂದು ವರ್ಷಕ್ಕೆ ಸುಮಾರು ೩೨ ಸಾವಿರ ಕೋಟಿ ರೂಪಾಯಿಯಷ್ಟು ಹಣವನ್ನು ಗೃಹಲಕ್ಷ್ಮೀಯವರಿಗೆ ನೀಡಲಾಗುತ್ತಿದೆ.

ನಮ್ಮ ಇಲಾಖೆಗೆ ನೀಡಿದ ಅನುದಾನ ಪೈಕಿ ಯಾವುದೇ ಅನುದಾನ ಉಳಿದಿಲ್ಲ. ಎಲ್ಲವೂ ಸರಿಯಾದ ರೀತಿಯಲ್ಲಿ ಖರ್ಚಾಗಿದೆ. ಶೇಕಡ ೧೦ರಷ್ಟು ಮಾತ್ರ ಅನುದಾನ ಮಿಕ್ಕಿರಬಹುದು. ಅದು ಕೂಡ ಮಾರ್ಚ್‌ ೩೧ರೊಳಗೆ ಖರ್ಚಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.ಗ್ಯಾರಂಟಿ ಯೋಜನೆಗಳು ಕಂಟಿನ್ಯೂ; ಬಜೆಟ್‌ನಲ್ಲಿ ಗೃಹಲಕ್ಷ್ಮಿ, ಯುವನಿಧಿ, ಶಕ್ತಿ, ಗೃಹಜ್ಯೋತಿ ಮೀಸಲಿಟ್ಟ ಹಣವೆಷ್ಟು?ನಮ್ಮ ನೆರೆಯ ಮಹಾರಾಷ್ಟ್ರ ರಾಜ್ಯವನ್ನು ನೋಡಿ, ಅಲ್ಲಿ ಚುನಾವಣೆಗೆ ಮುನ್ನ ಎರಡು ತಿಂಗಳ ದುಡ್ಡನ್ನು ಹಾಕಿದರು. ಅಲ್ಲಿನ ʻಮಾಝಿ ಲಡಕಿ ಬಹಿನ್‌ʼ ಯೋಜನೆಗೆ ಹಣನೇ ಇಲ್ಲ. ಇಲ್ಲಿ ನಮ್ಮನ್ನು ಮಾತ್ರ ಬಿಜೆಪಿಯವರು ದೊಡ್ಡದಾಗಿ ಪ್ರಶ್ನೆ ಮಾಡುತ್ತಾರೆಂದು ಖಾರವಾಗಿ ಹೇಳಿದ ಸಚಿವರು, ನಮ್ಮ ಕರ್ನಾಟಕದಲ್ಲೇ ಗೃಹಲಕ್ಷ್ಮೀ ಹಣ ಸರಿಯಾಗಿ ತಲುಪಿಸುತ್ತಿರುವುದು. ಅದೇ ಮಹಾರಾಷ್ಟ್ರದಲ್ಲಿ ಚುನಾವಣೆಗಿಂತ ಮುಂಚೆ ಅಷ್ಟೇ ಹಾಕಿದ್ದರು. ಆದರೆ, ಚುನಾವಣೆ ನಂತರ ಯೋಜನೆ ಜಾರಿಗೊಳ್ಳದೆ ನಿಂತಿದೆ ಎಂದು ತಿಳಿಸಿದರು.ಸಿಎಂ ಸಿದ್ದರಾಮಯ್ಯನವರದು ಇದು ಕೊನೆಯ ಬಜೆಟ್‌ ಎಂದೆಲ್ಲ ಬಿಜೆಪಿಯವರು ಹೇಳುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನಂತೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ೧೬ನೇ ದಾಖಲೆ ಬಜೆಟ್‌ ಮಂಡಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲರನ್ನೂ ಒಳಗೊಂಡ ಸಮಗ್ರವಾದ ಬಜೆಟ್‌ ಮಾಡುತ್ತಿರುವುದು ವಿಶೇಷ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಅವರುತಿಳಿಸಿದರು.

ಇನ್ನೂ ಸಚಿವ ಸಂಪುಟ ಪುನರ್‌ ರಚನೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯದಲ್ಲೇ ಸಂಪುಟ ಪುನರ್‌ ರಚನೆ ಆಗಲಿದೆ; ಇದು ಕೆಲ ಸಚಿವರಿಗೆ ಕೊನೆಯ ಬಜೆಟ್‌ ಎಂದೆಲ್ಲ ಹೇಳುತ್ತಿದ್ದಾರೆಂಬ ಸುದ್ದಿಗಾರರ ಪ್ರಶ್ನೆಗೆ ಸಚಿವರು, ಈವೊಂದು ಒಳ್ಳೆಯ ಸಂದರ್ಭದಲ್ಲಿ ಏನನ್ನೂ ಮಾತನಾಡಲು ಹೋಗುವುದಿಲ್ಲ. ಏಕೆಂದರೆ, ನಮ್ಮ ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಶಿಸ್ತು ಇದೆ. ಏನೇ ಚರ್ಚೆ, ತೀರ್ಮಾನಗಳಿದ್ದರೂ ಅದನ್ನು ಹೈಕಮಾಂಡ್‌ ಮಾಡುತ್ತದೆ ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಜಮಾ ಮಾಡೋದಕ್ಕೆ ಶುರು ಮಾಡಲಾಗಿದೆ. ಇಂದು ಲಕ್ಷಾಂತರ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇನ್ನೂ ಬಾಕಿ ಇರುವಂತ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ನಾಳೆ ಅಥವಾ ನಾಡಿದ್ದು ಜಮಾ ಆಗಲಿದೆ.ಹೌದು.. ರಾಜ್ಯದ ಯಜಮಾನಿ ಮಹಿಳೆಯರು ನಿರೀಕ್ಷೆ ಮಾಡುತ್ತಿದ್ದಂತ ಗೃಹ ಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಇಂದು ಅನೇಕ ಯಜಮಾನಿ ಮಹಿಳೆಯರಿಗೆ ರೂ.2000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.ರಾಜ್ಯ ಸರ್ಕಾರವು ಎರಡು ತಿಂಗಳಿನಿಂದ ಯಜಮಾನಿಯರಿಗೆ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಜಮಾ ಮಾಡಿರಲಿಲ್ಲ. ಒಟ್ಟಿಗೆ ಮುಂದಿನ ವಾರ ಹಣ ವರ್ಗಾವಣೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ತಿಳಿಸಿದ್ದರು.

ಅದರಂತೆ ಇಂದು ಅನೇಕ ಯಜಮಾನಿಯರ ಬ್ಯಾಂಕ್ ಖಾತೆಗೆ ರೂ.2000 ಬಾಕಿ ಹಣ ಜಮಾಗೊಂಡಿದೆ.

ನಿಮಗೆ ಗೃಹ ಲಕ್ಷ್ಮೀ ಯೋಜನೆ ಹಣ ( Gruhalakshmi yojana ) ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿಹಂತ

1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಳ್ಳಿ.ಹಂತ

2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿಹಂತ

3: ಆಗ ನಿಮ್ಮ ಆಧಾರ್ ಸಂಖ್ಯೆಯನ್ನು ಕೇಳುತ್ತದೆ. ಅದನ್ನು ನಮೂದಿಸಿ, ಗೆಟ್ ಓಟಿವಿ ನೀಡಿ, ಓಟಿಪಿ ಬಂದ ನಂತ್ರ, ವೆರಿಫೈ ಓಟಿಪಿಯ ಮೇಲೆ ಕ್ಲಿಕ್ ಮಾಡಿ.ಹಂತ

4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ.

5. ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿಹಂತ ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ.

ಗೃಹಲಕ್ಷ್ಮಿ ಯೋಜನೆಯ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದುಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಜಮಾ ಆಗಿರುವಂತ ಗೃಹ ಲಕ್ಷ್ಮೀ ಯೋಜನೆಯ ಹಣ ವರ್ಗಾವಣೆಯಾಗಿರುವುದು ತಿಳಿಯಲಿದೆ.

ಇದನ್ನು ಓದಿ👇🏻

https://www.kannadanewsnow.in/karnataka-budget-2025-gruhalakshmi-beneficiary-got-good-news/

https://www.kannadanewsnow.in/akrama-sakrama-pumpsets/

sreelakshmisai
Author

sreelakshmisai

Leave a Reply

Your email address will not be published. Required fields are marked *