Academic Time table 2024–25ನೇ ಸಾಲಿನ ಚಟುವಟಿಕೆಗಳು ಅಂತಿಮ ಹಂತಕ್ಕೆ ಬಂದಿರುವ ಈ ಸಂದರ್ಭದಲ್ಲಿ, ಮುಂದಿನ 2025–26ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳಿಗೆ ಪೂರ್ವಸಿದ್ಧತೆಗಾಗಿ ದಿನಾಂಕ 29.05.2025ರಿಂದ ಶಾಲೆಗಳು ಪ್ರಾರಂಭವಾಗಲಿವೆ.
ಇದನ್ನಿಟ್ಟುಕೊಂಡು ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ವರ್ಷಪೂರ್ತಿ ಶೈಕ್ಷಣಿಕ ದಿನಗಳು, ಕರ್ತವ್ಯದ ದಿನಗಳು ಹಾಗೂ ರಜಾದಿನಗಳ ಆಧಾರದ ಮೇಲೆ ವಾರ್ಷಿಕ ಕಾರ್ಯಯೋಜನೆ ಮತ್ತು ವೇಳಾಪಟ್ಟಿವನ್ನು ನಿರ್ಧರಿಸಲಾಗಿದೆ.


ಈ ವೇಳಾಪಟ್ಟಿಯು 2025–26ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳುವಂತೆ ಎಲ್ಲಾ ಸಂಬಂಧಿತ ಶಾಲೆಗಳ ಮುಖ್ಯಸ್ಥರು ಮತ್ತು ಸಿಬ್ಬಂದಿಗೆ ಅನುಸರಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.