Bhagyalakshmi yojane-ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್,18 ವರ್ಷ ತುಂಬಿದ ಹೆಣ್ಣು ಮಕ್ಕಳ ಖಾತೆಗೆ ಮೆಚುರಿಟಿ ಹಣ ಜಮಾ

Bhagyalakshmi yojane-ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಈ ಯೋಜನೆಯೆಡಿ ಆರಂಭಿಕ ವರ್ಷದಲ್ಲಿ ಹೆಸರು ನೋಂದಾಯಿಸಿದ ಫಲಾನುಭವಿಗಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ ಮಾಡಲಾಗಿದೆ.

ಹೆಣ್ಣು ಮಗುವಿನ ಸ್ಥಾನವನ್ನು ಮೊದಲು ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಚ್ಚಿಸಲು ಮತ್ತು ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ “ಭಾಗ್ಯಲಕ್ಷ್ಮಿ” ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಯಿತು.

ಈ ಯೋಜನೆಯ ಆರ್ಥಿಕ ಸೌಲಭ್ಯವನ್ನು ಹೆಣ್ಣು ಮಗುವಿಗೆ ಅದರ ತಾಯಿ/ತಂದೆ/ಪೋಷಕರ ಮೂಲಕ ಕೆಲವು ನಿಬಂಧನೆಗಳನ್ನು ಪೂರೈಸಿದಲ್ಲಿ ನೀಡಲಾಗುವುದು.← ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ 31.3.2006ರ ನಂತರ ಜನಿಸಿದ ಹೆಣ್ಣು ಮಕ್ಕಳು ಈ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳಲು ಆರ್ಹರಿರುತ್ತಾರೆ.

ಯೋಜನೆಯ ಪ್ರಮುಖ ಉದ್ದೇಶ

ಮಗು ಜನಿಸಿದ ಒಂದು ವರ್ಷದೊಳಗೆ ಜನನ ಪ್ರಮಾಣ ಪತ್ರವನ್ನು ಒದಗಿಸಿ ನೋಂದಾಯಿಸಲು ಅವಕಾಶವಿದೆ.

ಈ ಯೋಜನೆಯ ಸೌಲಭ್ಯಗಳನ್ನು ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ಸೀಮಿತಗೊಳಿಸಲಾಗಿದೆ.

ಫಲಾನುಭವಿ ಹೆಣ್ಣುಮಗುವಿನ ತಂದೆ ಅಥವಾ ತಾಯಿ ಶಾಶ್ವತ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡಿರತಕ್ಕದ್ದು ಮತ್ತು ಕುಟುಂಬದಲ್ಲಿ ಮಕ್ಕಳ ಸಂಖ್ಯೆ 2ಕ್ಕಿಂತ ಹೆಚ್ಚಿಗೆ ಇರಬಾರದು.

ನೋಂದಣಿ ನಂತರ ಹಾಗೂ ಪೂರ್ಣ ಪರಿಶೀಲನೆ ನಂತರ ದಿನಾಂಕ:31.07.2008ರವರೆಗೆ ಜನಿಸಿದ ಪ್ರತಿ ಫಲಾನುಭವಿಗೆ ರೂ.10,000/-ಗಳನ್ನು ಆಯ್ಕೆಯಾದ ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ನಿಶ್ಚಿತ ಠೇವಣಿಯನ್ನು ಇಡಲಾಗಿದೆ.

ಪಾಲುದಾರ ಹಣಕಾಸು ಸಂಸ್ಥೆಯು ಹೆಣ್ಣುಮಗುವಿನ ಹೆಸರಿನಲ್ಲಿ ಇಟ್ಟ ರೂ.10,000/-ಗಳ ಠೇವಣಿಯ ಮೇಲಿನ ಆದಾಯವನ್ನು ಗರಿಷ್ಠಗೊಳಿಸಿ, ಠೇವಣಿ ಹಣವನ್ನು ಬಡ್ಡಿ ಸಮೇತವಾಗಿ ಫಲಾನುಭವಿಗಳಿಗೆ 18 ವರ್ಷಗಳು ಪೂರ್ಣಗೊಂಡನಂತರ ದೊರಕಿಸಿಕೊಡುತ್ತದೆ.

ಮೊದಲ ಮಗುವಿಗೆ ಪರಿಪಕ್ವ ಮೊತ್ತ ರೂ.34,751/-ನ್ನು ಮತ್ತು ಎರಡನೇ ಮಗುವಿಗೆ ರೂ.40,918/-ನ್ನು ನೀಡಲಾಗುತ್ತದೆ.

ಫಲಾನುಭವಿಗೆ ವಿದ್ಯಾರ್ಥಿ ವೇತನ, ವಿಮೆ ಸೌಲಭ್ಯ ಮುಂತಾದ ಮಧ್ಯಂತರ ಸಂದಾಯಗಳನ್ನು ಯೋಜನೆಯಡಿ ತಿಳಿಸಲಾದ ಅರ್ಹತೆ ಮಾನದಂಡಗಳನ್ನು ಪೂರೈಸಿದಲ್ಲಿ ನೀಡಲಾಗುವುದು.

ದಿನಾಂಕ:01.04.2006 ರಿಂದ 31.07.2008ರ ವರೆಗೆ ಜನಿಸಿ ಯೋಜನೆಯಡಿ ನೋಂದಣಿಯಾದ ಮಕ್ಕಳು ವಿದ್ಯಾರ್ಥಿ ವೇತನ ಪಡೆಯಲು ಪ್ರತಿ ತರಗತಿಯಲ್ಲಿಯೂ ವರ್ಷದಿಂದ ವರ್ಷಕ್ಕೆ ತೇರ್ಗಡೆ ಹೊಂದಬೇಕು.

ಈ ಯೋಜನೆಯನ್ನು ದಿನಾಂಕ:20.01.2009ರಂದು ಪರಿಷ್ಕರಿಸಲಾಗಿರುತ್ತದೆ. (ದಿನಾಂಕ: 01.08.2008 ರಿಂದ ಜನಿಸಿದ ಹೆಣ್ಣು ಮಕ್ಕಳಿಗೆ ಅನ್ವಯಿಸುತ್ತದೆ).

ಯೋಜನೆಯಡಿ ನೋಂದಣಿಯಾದ ಕುಟುಂಬದಲ್ಲಿನ ಮೊದಲನೇ ಹೆಣ್ಣು ಮಗುವಿನ ಹೆಸರಿನಲ್ಲಿ ರೂ. 19,300/- ಹಾಗೂ ಅದೇ ಕುಟುಂದಲ್ಲಿನ 2ನೇ ಹೆಣ್ಣು ಮಗುವಿನ ಹೆಸರಿನಲ್ಲಿ ರೂ. 18,350/- ಗಳನ್ನು ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ಪ್ರಾರಂಭಿಕ ಠೇವಣಿ ಇಡಲಾಗುತ್ತದೆ.

18 ವರ್ಷ ಪೂರ್ಣಗೊಂಡ ನಂತರದಲ್ಲಿ ಹೆಣ್ಣು ಮಕ್ಕಳು ರೂ. 1,00,000/- ಪರಿಪಕ್ಷ ಮೊತ್ತ ಪಡೆಯಲು ಅರ್ಹರಿರುತ್ತಾರೆ.

ಯೋಜನೆ ಪಡೆಯಲು ಅರ್ಹತೆಗಳು ಹೀಗಿವೆ?

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಗುರುತಿಸಿ ಶಾಶ್ವತ ಬಿಪಿಎಲ್ ಕಾರ್ಡ್/ಆದ್ಯತಾ ಕುಟುಂಬ ಪಡಿತರ ಚೀಟಿ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳು ಯೋಜನೆಯಡಿ ನೊಂದಣಿ ಮಾಡಲು ಅರ್ಹರಿರುತ್ತಾರೆ.

ಕುಟುಂಬದಲ್ಲಿ ಮಕ್ಕಳ ಸಂಖ್ಯೆ ಎರಡನ್ನು ಮೀರಿರಬಾರದು. ಈ ಕುಟುಂಬವು ಮಗುವಿನ ತಂದೆ ಅಥವಾ ತಾಯಿ

ಯಾರದಾರೊಬ್ಬರು ಶಾಶ್ವತ ಕುಟುಂಬ ಯೋಜನೆಯ ಪದ್ಧತಿಯನ್ನು ಅಳವಡಿಸಿಕೊಂಡಿರಬೇಕು. ವಿಶೇಷ ಪ್ರಕರಣಗಳಲ್ಲಿ ಅಂದರೆ ಮೊದಲನೇ ಹೆರಿಗೆಯಲ್ಲಿ ಅವಳಿ ತ್ರಿವಳಿ ಹೆಣ್ಣು ಮಕ್ಕಳು ಜನಿಸಿದ್ದಲ್ಲಿ ಹಾಗು ಎರಡನೇ ಹೆರಿಗೆಯಲ್ಲಿ ಅವಳಿ/ತ್ರಿವಳಿ ಹೆಣ್ಣು ಮಕ್ಕಳು ಜನಿಸಿದ್ದಲ್ಲಿ ಈ ಎಲ್ಲಾ ಹೆಣ್ಣು ಮಕ್ಕಳಿಗೂ ಸೌಲಭ್ಯ ನೀಡುವುದು. ಈ ಸೌಲಭ್ಯವನ್ನು ಎರಡು ಹೆರಿಗೆಗೆ ಮಾತ್ರ ಮಿತಿಗೊಳಿಸುವುದು. ಇಂತಹ ಪ್ರಕರಣಗಳಲ್ಲಿ ಮಾತ್ರ ಕುಟುಂಬದ ಮಕ್ಕಳ ಸಂಖ್ಯೆ ಎರಡನ್ನು ಮೀರಿರಬಾರದು ಎಂಬ ನಿಯಮವನ್ನು ಸಡಿಲಿಸಲಾಗಿದೆ.

ಈ ಯೋಜನೆಯನ್ನು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲೂ ಅನುಷ್ಟಾನಗೊಳಿಸಲಾಗುವುದು. ಅಂಗನವಾಡಿ ಕೇಂದ್ರಗಳು ಇಲ್ಲದೆ ಇರುವ ಪ್ರದೇಶಗಳಲ್ಲಿ ವಾಸಿಸುವ ಪೋಷಕರು ತಮ್ಮ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ನೊಂದಣಿ ಮಾಡುವುದು. ಮಗುವಿನ ಜನನವನ್ನು ಕಡ್ಡಾಯವಾಗಿ ನೊಂದಾಯಿಸಿರಬೇಕು ಹಾಗೂ ಜನನ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಪರಿಪಕ್ವ ಮೊತ್ತವನ್ನು ಪಡೆಯಲು ಫಲಾನುಭವಿ ಮಗು ಕನಿಷ್ಠ 8ನೇ ತರಗತಿಯವರೆಗೆ ವಿದ್ಯಾಭ್ಯಾಸವನ್ನು ಪಡೆದಿರಬೇಕು. ಆದರೆ ವಿಕಲಚೇತನ ಮಕ್ಕಳಿಗೆ ವಿನಾಯಿತಿ ನೀಡಲಾಗಿದ್ದು, ಸದರಿ ಮಕ್ಕಳು 1 ರಿಂದ 5ನೇ ತರಗತಿವರೆಗೆ ವ್ಯಾಸಂಗ ಮಾಡಿರಬೇಕು. ಒಂದು ವೇಳೆ ವಿಕಲಚೇತನ ಮಕ್ಕಳು ತೀವ್ರತರವಾದ ವಿಕಲತೆಯಿಂದ ಬಳಲುತ್ತಿದ್ದಲ್ಲಿ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೆಶಕರು ಪ್ರತಿ ಪ್ರಕರಣಗಳ ಸಾಧಕ ಬಾಧಕಗಳನ್ನು ಪರಿಶೀಲಿಸಿ ಈ ಷರತ್ತನ್ನು ಸಹ ಸಡಿಲಿಸಲು ಅಧಿಕಾರ ನೀಡಿ ಆದೇಶಿಸಿದೆ.

5ನೇ ಮತ್ತು 8ನೇತರಗತಿ ಉತ್ತೀರ್ಣರಾಗಿರುವ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಣ ಪಡೆದು ಸಲ್ಲಿಸುವುದು.

ಬಾಲಕಾರ್ಮಿಕ ನಿಷೇಧ ಕಾಯ್ದೆ 1986ರಂತೆ ಬಾಲ ಕಾರ್ಮಿಕಳಾಗಿರತಕ್ಕದ್ದಲ್ಲ.

18 ವರ್ಷ ಪೂರೈಸುವ ಮೊದಲು ವಿವಾಹವಾಗತಕ್ಕದ್ದಲ್ಲ.ಆಯ್ಕೆಯಾದ ಫಲಾನುಭವಿಯು ಮೇಲೆ ತಿಳಿಸಿದ ಅರ್ಹತೆಯ ಮಾನದಂಡಗಳಲ್ಲಿನ ಯಾವುದೇ ಒಂದು ಷರತ್ತುನ್ನು ಪೂರೈಸದಿದ್ದಲ್ಲಿಯೂ ಸಹ ಸೌಲಭ್ಯವನ್ನು ಮುಟ್ಟುಗೋಲು ಹಾಕಲಾಗುವುದು.

sreelakshmisai
Author

sreelakshmisai

Leave a Reply

Your email address will not be published. Required fields are marked *