Canceled labour card-ರಾಜ್ಯ ಸರ್ಕಾರದಿಂದ ಕಾರ್ಮಿಕರ ನಕಲಿ ಕಾರ್ಡ್ ಗಳಿಗೆ ಬ್ರೇಕ್ ಹಾಕಲಾಗಿದೆ. ರಾಜ್ಯದಲ್ಲಿ ಒಟ್ಟು 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳ ತಪಾಸಣೆ ನಡೆಸಿದಾಗ, 26 ಲಕ್ಷ ಕಾರ್ಡ್ ನಕಲಿ ಎಂದು ಪತ್ತೆಯಾಗಿ ಅವುಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ತಿಳಿಸಿದರು.
ಇದೇ ವೇಳೆ, ಪಿಎಂಜಿಎಸ್‌ವೈ ಮಾನದಂಡಗಳ ಸರಳೀಕರಣ ಆಗದ ಕಾರಣ, ರಾಜ್ಯ ಸರ್ಕಾರ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಶೀಘ್ರವೇ ಅನುಷ್ಠಾನಗೊಳ್ಳಲಿದೆ. ಪ್ರಗತಿಪಥ ಯೋಜನೆಯಡಿ ₹5,190 ಕೋಟಿ ವೆಚ್ಚದಲ್ಲಿ 7,110 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಮಾಹಿತಿ ನೀಡಿದರು.