Farmer chlidern free traning: ರೈತರ ಮಕ್ಕಳಿಗೆ ಗುಡ್ ನ್ಯೂಸ್ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Farmer chlidern free traning, ತೋಟಗಾರಿಕಾ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2025 ರ ಮೇ, 02 ರಿಂದ 2026 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಏಪ್ರಿಲ್, 28 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಬೆಳಗ್ಗೆ: 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿ ಪಡೆಯಬಹುದು.

ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‌ಎಸ್‌ಎಲ್ಸಿ ಅಂಕಪಟ್ಟಿ, ಭಾಪಾಕಾಗದ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಖಖಿಅ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸತಕ್ಕದ್ದು ಎಂದು (ರಾಜ್ಯ ವಲಯ), ಮಡಿಕೇರಿ, ಕೊಡಗು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

sreelakshmisai
Author

sreelakshmisai

Leave a Reply

Your email address will not be published. Required fields are marked *