Ganga Kalyan yojane 2025-ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವವರಿಗೆ ಸಹಾಯಧನ ನೀಡಲಾಗುತ್ತಿದೆ. ಅರ್ಹ ರೈತರು ತಕ್ಷಣವೇ ಅರ್ಜಿ ಸಲ್ಲಿಸಬಹುದು.
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ. 3.75 ಲಕ್ಷಗಳನ್ನು.
ಹನಿ ನೀರಾವರಿ ಯೋಜನೆ – ಬಳ್ಳಾರಿ ಜಿಲ್ಲೆಗೆ ₹153.53 ಲಕ್ಷ ಅನುದಾನ
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮ ಅಡಿಯಲ್ಲಿ ಬಳ್ಳಾರಿ ಜಿಲ್ಲೆಗೆ ₹153.53 ಲಕ್ಷ ರೂ. ಅನುದಾನ ಮಂಜೂರಾಗಿದೆ. ರೈತರು ಶೇ.90 ರಷ್ಟು ಗರಿಷ್ಠ 2 ಹೆಕ್ಟೇರ್ ವರೆಗೆ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.
ಅರ್ಜಿಗೆ ಅಗತ್ಯ ಮಾಹಿತಿ
- ಯೋಜನೆ ಹೆಸರು: ಗಂಗಾ ಕಲ್ಯಾಣ ಹಾಗೂ ಹನಿ ನೀರಾವರಿ ಯೋಜನೆಲಭಿಸುವ ಸಹಾಯಧನ: ಶೇ.90 ರಷ್ಟು (ಗರಿಷ್ಠ 2 ಹೆಕ್ಟೇರ್ ವರೆಗೆ)
- ಅನುದಾನಿತ ಮೊತ್ತ: ₹153.53 ಲಕ್ಷ (ಬಳ್ಳಾರಿ ಜಿಲ್ಲೆಗೆ)
- ಅರ್ಜಿಯ ಮುಕ್ತಾಯ ದಿನಾಂಕ: ಶೀಘ್ರದಲ್ಲಿ ಅಧಿಸೂಚನೆ.
- ಮಾಹಿತಿ ಪಡೆಯಲು: ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಬಹುದು.
ದಾಖಲೆಗಳು( Documents )
1.ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ.
2.ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ.
3.ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ).
4.ಇತ್ತೀಚಿನ ಆರ್‌ಟಿಸಿ ಪ್ರತಿ.
5.ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ.
6.ಬ್ಯಾಂಕ್ ಪಾಸ್ ಬುಕ್ ಪ್ರತಿ.
7.ಭೂ-ಕಂದಾಯ ಪಾವತಿಸಿದ ರಸೀದಿ.
8.ಸ್ವಯಂ ಘೋಷಣೆ ಪತ್ರ.
9.ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಅವರ ಪ್ರಕಟಣೆಯನ್ನು ಉಲ್ಲೇಖಿಸಬಹುದು. ಯೋಗ್ಯ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ!