ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಸರ್ಕಾರದ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹2,000 ಹೆಚ್ಚಿಸಿದ್ದೆವು. ಅದನ್ನು ಯಾವುದೇ ಸರ್ಕಾರ ಮುಂದುವರಿಸಿಲ್ಲ. ಈ ಬಜೆಟ್‌ನಲ್ಲಿ ನಾವು ಕಾರ್ಯಕರ್ತೆಯರ ಗೌರವಧನಕ್ಕೆ ₹1,000 ಮತ್ತು ಸಹಾಯಕಿಯರ ಗೌರವಧನಕ್ಕೆ ₹750 ಹೆಚ್ಚಳ ಘೋಷಿಸಿದ್ದೇವೆ. ಇದನ್ನು ಜಾರಿಗೆ ತರುವ ಉದ್ದೇಶವಿದೆ” ಎಂದು ಹೇಳಿದರು.
ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.
ಸಚಿವ ಕೆ.ಎನ್. ರಾಜಣ್ಣ ವಿರುದ್ಧ ನಡೆದ ಹನಿಟ್ರ್ಯಾಪ್ ಯತ್ನದ ಬಗ್ಗೆ ಪ್ರತಿಕ್ರಿಯಿಸಿದ ಹೆಬ್ಬಾಳಕರ, “ಸಚಿವರೊಬ್ಬರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರ್ಘಟನೆ. ರಾಜಣ್ಣ ಅವರು ತಮ್ಮ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಇಲಾಖೆ ಈ ವಿಚಾರವನ್ನು ನೋಡಿಕೊಳ್ಳುತ್ತದೆ. ನಾನು ಈ ಕುರಿತು ಹೆಚ್ಚು ಮಾತನಾಡಲು ಇಚ್ಛಿಸುವುದಿಲ್ಲ” ಎಂದರು.