ರಾಜ್ಯಾದ್ಯಂತದ ಯಜಮಾನರಿಗೆ march ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಖಾತೆಗೆ ಜಮೆಯಾಗುತ್ತಿಲ್ಲ. ಕಾರಣವೇನೆಂದರೆ, ಹಣ ಪಾವತಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಈ ಯೋಜನೆಗೆ ಸಂಬಂಧಿಸಿದಂತೆ, ಕೆಲ ಫಲಾನುಭವಿಗಳು ಆದಾಯ ತೆರಿಗೆ (ಐಟಿ) ಅಥವಾ ಜಿಎಸ್‍ಟಿ ಪೇಯರ್ ಆಗಿದ್ದಾರೆ ಎಂಬ ಶಂಕೆಯಿದೆ. ಇದರ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು, ಈ ಮಾಹಿತಿ ಆದಾಯ ತೆರಿಗೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಗಳಿಂದ ದೃಢೀಕರಿಸಬೇಕೆಂದು ಸೂಚಿಸಿದ್ದಾರೆ.
ಈ ಹಿನ್ನಲೆಯಲ್ಲಿ ಅಲ್ಲಿಯವರೆಗೂ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರಿಂದ ತಿಳಿಸಿರುತ್ತಾರೆ. ಹೀಗಾಗಿ ಸದ್ಯಕ್ಕೆ ಮಾರ್ಚ್ ಸೇರಿದಂತೆ ಬಾಕಿ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿ ತಾತ್ಕಾಲಿಕವಾಗಿ ಸ್ಥಗಿತಗೊಂಡಂತೆ ಆಗಿದೆ..
ಯೋಜನೆಯ ದುರುಪಯೋಗ ತಡೆಯಲು ಫಲಾನುಭವಿಗಳ ವಿವರಗಳ ಪರಿಶೀಲನೆಯ ಪ್ರಕ್ರಿಯೆ ನಡೆಯುತ್ತಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಹಣ ಪಾವತಿ ಕುರಿತ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.