Ineligible BPL Card: ಬಿಪಿಎಲ್ ಪರಿಷ್ಕರಣೆ: ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಸಮಿತಿ ರಚನೆ

ಬಿಪಿಎಲ್ ಪರಿಷ್ಕರಣೆ: ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಸಮಿತಿ ರಚನೆ

Ineligible BPL Card, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಅವರು, ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆಹಚ್ಚಿ ಅವರ ಹೆಸರುಗಳನ್ನು ತೆಗೆದುಹಾಕಲು ಗ್ರಾಮ ಮಟ್ಟದಲ್ಲಿ ಸಮಿತಿ ರಚಿಸಲಾಗುವುದಾಗಿ ವಿಧಾನ ಪರಿಷತ್ತಿನಲ್ಲಿ ಸೋಮವಾರ ಘೋಷಿಸಿದರು.

ಪ್ರಶ್ನೋತ್ತರ ಕಲಾಪದಲ್ಲಿ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿವೇಶನ ಮುಗಿದ ನಂತರ ಮೊದಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ತಿಳಿಸಿದರು. ನಂತರ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಪಿಡಿಒ ಸೇರಿದಂತೆ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುವುದು.

ನಿಜವಾದ ಫಲಾನುಭವಿಗಳಿಗೆ ಸವಲತ್ತುಗಳ ಗ್ಯಾರಂಟಿ

ಸರ್ಕಾರದ ಉದ್ದೇಶ ನಿಜವಾದ ಬಿಪಿಎಲ್ ಫಲಾನುಭವಿಗಳಿಗೆ ಸವಲತ್ತುಗಳನ್ನು ಖಚಿತಪಡಿಸುವುದಾಗಿದೆ. ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ತೆಗೆದುಹಾಕುವ ಕಾರ್ಯದಲ್ಲಿ ಎಲ್ಲಾ ಜನಪ್ರತಿನಿಧಿಗಳು ಸಹಕಾರ ನೀಡಿದರೆ, ಪರಿಷ್ಕರಣೆ ಪ್ರಕ್ರಿಯೆ ಪರಿಣಾಮಕಾರಿಯಾಗಿ ನಡೆಯಲಿದೆ. ಈ ಕಾರ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವರು ಹೇಳಿದರು.

ಹಿಂದಿನ ಪರಿಷ್ಕರಣೆಗೆ ಎದುರಾದ ವಿರೋಧ

ಸಚಿವರು, ಈ ಹಿಂದೆ ನಡೆದ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ವಿವಾದಗಳು ಹುಟ್ಟಿದ ಬಗ್ಗೆ ಪ್ರಸ್ತಾಪಿಸಿದರು. 99 ಎಪಿಎಲ್ ಕಾರ್ಡ್‌ಗಳು ಬಿಪಿಎಲ್ ಪಟ್ಟಿಗೆ ಸೇರ್ಪಡೆಯಾದರೂ ಯಾರು ಪ್ರಶ್ನೆ ಮಾಡೋದಿಲ್ಲ, ಆದರೆ ಒಂದೇ ಒಂದು ಬಿಪಿಎಲ್ ಕಾರ್ಡ್ ತಪ್ಪಿಸಿಕೊಂಡರೆ ದೊಡ್ಡ ಸಮಸ್ಯೆ ಉಂಟಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಪಿಎಲ್ ಫಲಾನುಭವಿಗಳ ಸ್ಥಿತಿ

ಪ್ರಸ್ತುತ, ರಾಜ್ಯದಲ್ಲಿ 2.95 ಲಕ್ಷ ಬಿಪಿಎಲ್ ಫಲಾನುಭವಿಗಳಿದ್ದು, 2.40 ಲಕ್ಷ ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಅನರ್ಹ ಫಲಾನುಭವಿಗಳು ಕೂಡಾ ಸೇರ್ಪಡೆಯಾಗಿರುವುದರಿಂದ ಪರಿಷ್ಕರಣೆ ಮಾಡಲಾಗುತ್ತಿದೆ. ಪರಿಷ್ಕರಣೆ ಬಳಿಕ ಅನರ್ಹ ಫಲಾನುಭವಿಗಳನ್ನು ಎಪಿಎಲ್ ಪಟ್ಟಿಗೆ ಸೇರಿಸಲಾಗುವುದು.

ಪರಿಷ್ಕರಣೆಗೆ ಕೇಂದ್ರ ಸರ್ಕಾರದ ಮಿತಿಗಳು

ಕೇಂದ್ರ ಸರ್ಕಾರ ರಾಜ್ಯಕ್ಕೆ 1.10 ಕೋಟಿ ಫಲಾನುಭವಿಗಳನ್ನು ಮಾತ್ರ ಬಿಪಿಎಲ್ ಪಟ್ಟಿಯಲ್ಲಿ ಸೇರಿಸಲು ಅನುಮತಿ ನೀಡಿದೆ. ಆದರೆ ರಾಜ್ಯದಲ್ಲಿ 4.50 ಕೋಟಿ ಫಲಾನುಭವಿಗಳಿಗೆ ಪಡಿತರ ಸೌಲಭ್ಯ ನೀಡಲಾಗುತ್ತಿದೆ. ಹೀಗಾಗಿ, ಸುಮಾರು 25 ಲಕ್ಷ ಪಡಿತರ ಚೀಟಿಗಳನ್ನು ಬಿಪಿಎಲ್ ಪಟ್ಟಿಯಿಂದ ತೆಗೆದುಹಾಕಬೇಕಾಗಿದೆ. ಈ ಪ್ರಕ್ರಿಯೆ ವೇಳೆ ಕೆಲ ಗೊಂದಲಗಳು ಎದುರಾಗಬಹುದು, ಆದ್ದರಿಂದ ಜನಪ್ರತಿನಿಧಿಗಳು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.

ನೈಜ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಎಚ್ಚರಿಕೆ

ಮುಖ್ಯಮಂತ್ರಿಗಳು ನಿಜವಾದ ಫಲಾನುಭವಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ. ಆದರೆ, ಏಕಕಾಲದಲ್ಲಿ ಈ ಪ್ರಕ್ರಿಯೆ ನಡೆಸುವಾಗ ತಾಂತ್ರಿಕ ಸಮಸ್ಯೆಗಳು ಎದುರಾಗಬಹುದು ಎಂದು ಸಚಿವರು ಹೇಳಿದರು.

ಸದಸ್ಯರ ಪ್ರತಿಕ್ರಿಯೆ

ಸದನದಲ್ಲಿ ಮಾತನಾಡಿದ ಸದಸ್ಯ ಸಿ.ಟಿ. ರವಿ, ಬಿಪಿಎಲ್ ಪರಿಷ್ಕರಣೆ ಪ್ರಕ್ರಿಯೆಯಿಂದ ನೈಜ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು. ಸರಕಾರ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದರು.

sreelakshmisai
Author

sreelakshmisai

Leave a Reply

Your email address will not be published. Required fields are marked *