Job Fair :ಈ ಜಿಲ್ಲೆಗಳಲ್ಲಿ ಬೃಹತ್ ಉದ್ಯೋಗ ಮೇಳ 2025 ಕೂಡಲೆ ಅರ್ಜಿ ಸಲ್ಲಿಸಿ

Job Fair: ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 1, 2025ರಂದು ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ, ಚಿತ್ರದುರ್ಗದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

50 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಲ್ಲಿ 5000+ ಉದ್ಯೋಗಗಳು

ಕಿರ್ಲೋಸ್ಕರ್, ಎಲ್‌ & ಟಿ ಸೇರಿದಂತೆ ಫೈನಾನ್ಸ್, ಐಟಿ, ಮೊಬೈಲ್, ಫರ್ಟಿಲೈಜರ್, ಆಟೋಮೊಬೈಲ್, ಗಾರ್ಮೆಂಟ್ಸ್, ಫಾರ್ಮಾ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ.

ನೊಂದಣಿ ಹೇಗೆ ಮಾಡಿಕೊಳ್ಳಬಹುದು?

✅ ಆನ್‌ಲೈನ್ ಮೂಲಕ:

Google Forms ಲಿಂಕ್ ಕ್ಲಿಕ್ ಮಾಡಿ ನಿಮ್ಮ ವಿವರಗಳನ್ನು ಭರ್ತಿ ಮಾಡಿ.ಚಿತ್ರದುರ್ಗ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್ ನಲ್ಲಿಯೂ ನೋಂದಣಿ ಸಾಧ್ಯ.

✅ ಆಫ್‌ಲೈನ್ ಮೂಲಕ:

ಉದ್ಯೋಗ ಮೇಳ ದಿನ ಬೆಳಿಗ್ಗೆ 09:00 ಗಂಟೆಗೆ ಸ್ಥಳೀಯ ಕೌಂಟರ್‌ಗಳಲ್ಲಿ ನೊಂದಣಿ ಮಾಡಿಕೊಳ್ಳಬಹುದು.

ಯಾರು ಭಾಗವಹಿಸಬಹುದು?

  • ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹೊಂದಿರುವ ಎಲ್ಲ ಉದ್ಯೋಗಾರ್ಹ ಅಭ್ಯರ್ಥಿಗಳು.
  • ಯುವನಿಧಿ ಯೋಜನೆಯಡಿ ನೋಂದಾಯಿತ ಅಭ್ಯರ್ಥಿಗಳು ಕೂಡ ಪಾಲ್ಗೊಳ್ಳಬಹುದು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರು:

ಉದ್ಘಾಟನೆ: ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ಮುಖ್ಯ ಅತಿಥಿಗಳು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಸಂಸದ ಗೋವಿಂದ ಕಾರಜೋಳಅಧ್ಯಕ್ಷತೆ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಅನೇಕ ಶಾಸಕರು, ವಿಧಾನಪರಿಷತ್ ಸದಸ್ಯರು, ನಿಗಮಗಳ ಅಧ್ಯಕ್ಷರು ಹಾಗೂ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

ವಿಶೇಷ ಸೂಚನೆ:

ಆನ್‌ಲೈನ್ ನೋಂದಣಿ ಮಾಡಿದವರಿಗೆ ನೇರವಾಗಿ ಕಂಪನಿಗಳಲ್ಲಿ ಸಂದರ್ಶನ ಅವಕಾಶ ದೊರೆಯುತ್ತದೆ. ಹೀಗಾಗಿ ಮೊದಲು ನೋಂದಣಿ ಮಾಡಿಕೊಳ್ಳುವುದು ಸೂಕ್ತ.

ಇದು ಉದ್ಯೋಗ ಹುಡುಕುವ ಯುವಕರಿಗೆ ಸುವರ್ಣಾವಕಾಶ! ಭಾಗವಹಿಸಿ, ಭವಿಷ್ಯವನ್ನು ಕಟ್ಟಿಕೊಳ್ಳಿ!

sreelakshmisai
Author

sreelakshmisai

Leave a Reply

Your email address will not be published. Required fields are marked *