Karnataka budget 2025: ರಾಜ್ಯ ಬಜೇಟ್ ಮಂಡನೆ, ಕೃಷಿ ಕ್ಷೇತ್ರಕ್ಕೆ ಸಿಗಲಿದೆ ಭರಪೂರ ಉಡುಗೊರೆ?

Karnataka budget-2025 ಮಾರ್ಚ್ 3ರಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ

ವಿಧಾನಮಂಡಲ ಅಧಿವೇಶನ ಆರಂಭ

ರಾಜ್ಯದ ಹೊಸ ವರ್ಷದ ಮೊದಲ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ಈ ದಿನ ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 4 ರಿಂದ ಮಾರ್ಚ್ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಮಾರ್ಚ್ 7 ರಂದು 2025-2026 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramayya)ತಿಳಿಸಿದ್ದಾರೆ.

ರಾಜ್ಯಪಾಲರ ಭಾಷಣ ಮತ್ತು ಬಜೆಟ್ ಚರ್ಚೆ

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಅಧಿವೇಶನದ ಅವಧಿಯನ್ನು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯಪಾಲರು ಮೂರನೇ ತಾರೀಖಿನಂದು ಭಾಷಣ ಮಾಡಲಿದ್ದು, ಮಂಗಳವಾರದಿಂದ ಗುರುವಾರದವರೆಗೆ (ಮಾರ್ಚ್ 4-6) ಈ ಭಾಷಣದ ಕುರಿತು ಚರ್ಚೆ ನಡೆಯಲಿದೆ. ಮಾರ್ಚ್ 7 ರಂದು ಬಜೆಟ್ ಮಂಡನೆಯಾಗಲಿದ್ದು, ಆಯವ್ಯಯದ ಮೇಲೆ ಚರ್ಚೆ ನಡೆದ ಬಳಿಕ ಮಾರ್ಚ್ ತಿಂಗಳ ಕೊನೆಗೆ ಸರ್ಕಾರದ ಉತ್ತರ ನೀಡಲಾಗುವುದು. ಮತ್ತು ಬಜೆಟ್ ಚರ್ಚೆ

ಬಜೆಟ್ ಪೂರ್ವಭಾವಿ ಸಭೆಗಳು ಮತ್ತು ರೈತರೊಂದಿಗೆ ಚರ್ಚೆ

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ. ರೈತರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದರು.

sreelakshmisai
Author

sreelakshmisai

Leave a Reply

Your email address will not be published. Required fields are marked *