ಏಪ್ರಿಲ್ 23: ಕರ್ನಾಟಕದಲ್ಲಿ ಈ ವರ್ಷ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ರಾಜ್ಯದಾದ್ಯಂತ ಮುಂದಿನ ಐದು ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಮೂರು ಗಂಟೆಗಳಲ್ಲಿ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೇಲೂರು, ತಿಪಟೂರು, ಬೆಳ್ತಂಗಡಿ, ಕೆಂಭಾವಿ, ಧಾರವಾಡ, ಯಡ್ರಾಮಿಯಲ್ಲಿ ಮಳೆಯಾಗಿದೆ. ಚಂಡಮಾರುತದಿಂದಾಗಿ ಕರ್ನಾಟಕ, ಛತ್ತೀಸ್ಗಢ, ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ಮಂಗಳೂರು, ಉಡುಪಿ, ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದ್ದು, ಮರಗಳು, ವಿದ್ಯುತ್ ತಂತಿಗಳು ಧರೆಗೆ ಉರುಳಿವೆ. ಮನೆ, ಕಾರು ಜಖಂಗೊಂಡಿರುವ ಘಟನೆ ಮಂಗಳವಾರ ವರದಿಯಾಗಿದೆ.ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
source Metrology department