Karnataka Whether forecast : ಕರ್ನಾಟಕ ಈ ಮೂರು ಜಿಲ್ಲೆಗಳಲ್ಲಿ 48 ಗಂಟೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕ ಈ ಮೂರು ಜಿಲ್ಲೆಗಳಲ್ಲಿ ಇಂದು ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ಇಲ್ಲಿದೆ ವಿವರ. ಕರ್ನಾಟಕದಲ್ಲಿ ಕಳೆದ ನಾಲ್ಕೈದು ದಿನಗಳಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು. ಆದರೆ ನಿನ್ನೆಯಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಕಡಿಮೆಯಾಗಿದ್ದು ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.

ಇದರಿಂದಾಗಿ ಬೆಂಗಳೂರಿಗರಿಗೆ ಮಳೆಯ ಆಶಾಭಾವನೆ ಶುರುವಾಗಿದೆ. ಆದರೆ ನಿನ್ನೆ ಮೋಡ ಕವಿದ ವಾತಾವರಣವಿದ್ದರೂ ಮಳೆಯಿರಲಿಲ್ಲ. ಇಂದೂ ಬೆಂಗಳೂರಿನಲ್ಲಿ ಅದೇ ರೀತಿಯ ವಾತಾವರಣ ಮುಂದುವರಿಯಲಿದೆ. ಗರಿಷ್ಠ ತಾಪಮಾನ ಇಂದು 31 ಡಿಗ್ರಿಗೆ ಇಳಿಕೆಯಾಗಲಿದೆ.

ಆದರೆ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಇಂದು ಮಳೆಯಾಗುವ ಸೂಚನೆಯಿದೆ. ಅದರಲ್ಲೂ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಬಹುತೇಕ ಮೋಡ ಮತ್ತು ಬಿಸಿಲಿನ ನಡುವೆ ಕಣ್ಣಾಮುಚ್ಚಾಲೆ ಮುಂದುವರಿಯಲಿದೆ.

ಕರ್ನಾಟಕದ ಹವಾಮಾನ ಮುನ್ಸೂಚನೆ:ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಈ ಮಳೆಯ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಈಗಿನಂತೆ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ದಾವಣಗೆರೆ ಬಳ್ಳಾರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ತಿರುಗುವಿಕೆ ಮತ್ತು ಅರಬ್ಬಿ ಸಮುದ್ರದ ನೈರುತ್ಯ ಕಡೆಯಿಂದ ಬೀಸುತ್ತಿರುವ ಗಾಳಿಯ ಕಾರಣದಿಂದ ಈಗಿನ ಮಳೆಯ ವಾತಾವರಣವು ಉಂಟಾಗಿದೆ.

sreelakshmisai
Author

sreelakshmisai

Leave a Reply

Your email address will not be published. Required fields are marked *