Sarige elake jobs-ಸಾರಿಗೆ ಇಲಾಖೆಯಲ್ಲಿ 9000 ಹುದ್ದೆಗಳಿಗೆ ನೇಮಕಾತಿ
ರಾಜ್ಯ ಸರ್ಕಾರವು ಸಾರಿಗೆ ಸಂಸ್ಥೆಗಳಲ್ಲಿ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಸರ್ಕಾರಿ ಬಸ್‌ಗಳ ಸಂಚಾರ ಹೆಚ್ಚಾಗಿದೆ. ಮಹಿಳೆಯರು ಉದ್ಯೋಗ, ಶಿಕ್ಷಣ ಮತ್ತು ಪ್ರವಾಸಕ್ಕಾಗಿ ಉಚಿತ ಪ್ರಯಾಣ ಸೌಲಭ್ಯವನ್ನು ಬಳಸುತ್ತಿದ್ದು, ಇದರಿಂದ ರಾಜ್ಯದ ಸಾರಿಗೆ ವ್ಯವಸ್ಥೆಗೆ ಹೊಸ ಶಕ್ತಿ ಸಿಕ್ಕಿದೆ ಎಂದಿದ್ದಾರೆ.
ಪ್ರಯಾಣಿಕರ ಸಂಖ್ಯೆಯ ಹೆಚ್ಚಳದ ಕಾರಣ ಹೆಚ್ಚುವರಿ ಬಸ್‌ಗಳನ್ನು ಖರೀದಿಸಲಾಗಿದ್ದು, ಉದ್ಯೋಗಾವಕಾಶಗಳು ಸಹ ಹೆಚ್ಚಾಗಿವೆ. ಈಗಾಗಲೇ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದ್ದು, ಇದಲ್ಲದೇ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ.