Whether Forecast: ಕರ್ನಾಟಕದ ಹವಾಮಾನ ಮುನ್ಸೂಚನೆ 10.3.2025

10.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಒಣ ಹವೆಯೊಂದಿಗೆ ಉಷ್ಣಾಂಶ ಮತ್ತಷ್ಟು ಏರಿಕೆಯಗುವ ಮುನ್ಸೂಚನೆ ಇದೆ.

ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಸಧ್ಯಕ್ಕೆ ಜೋರು ಮಳೆಯ ಸಾಧ್ಯತೆ ಕಾಣುತ್ತಿಲ್ಲ. ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನಂತೆ ಮಾರ್ಚ್ 11ರಂದು ಕೊಡಗು ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 12ರಂದು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ನಂತರ ಮೋಡದ ವಾತಾವರಣದ ಸಾಧ್ಯತೆ ಇದೆ. ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನಂತೆ ಮಾರ್ಚ್ 11 ಹಾಗೂ 12ರಂದು ಚಾಮರಾಜನಗರ ತಮಿಳುನಾಡು ಗಡಿ ಭಾಗಗಳಲ್ಲಿ (ಕೊಳ್ಳೇಗಾಲ ಭಾಗಗಳಲ್ಲಿ) ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. *ಈಗಿನ ಮುನ್ಸೂಚೆನೆಯಂತೆ ಮಾರ್ಚ್ 18ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬದಲಾಗಬಹುದು. ಕಾದು ನೋಡಬೇಕಾಗಿದೆ.*

sreelakshmisai
Author

sreelakshmisai

Leave a Reply

Your email address will not be published. Required fields are marked *