ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಅವಧಿಯಲ್ಲಿ ಗುಡುಗು-ಮಿಂಚು, ಬಿರುಗಾಳಿ (ಗಾಳಿಯ ವೇಗ 30-40 ಕಿಮೀ/ಗಂ) ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರೊಂದಿಗೆ, ಕೆಲವಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ.

ಮಳೆ ನಿರೀಕ್ಷೆಯಿರುವ ಜಿಲ್ಲೆಗಳು: ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಉಷ್ಣ ಅಲೆ ಇರುವ ಜಿಲ್ಲೆಗಳು: ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಒಣ ಹವೆ ಮುಂದುವರಿಯುವ ಜಿಲ್ಲೆಗಳು: ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿಯು.
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಹಗರಣ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಕರಾವಳಿಯಲ್ಲಿ ಮಾರ್ಚ್ 24ರ ತನಕವೂ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 25ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಹಗುರ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮಾರ್ಚ್ 25ರಿಂದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರ ಮೋಡದ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 22ರಿಂದ ಅಲ್ಲಲ್ಲಿ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.l