ZP TP elections-ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿಗಳಿಗೆ ಚುನಾವಣೆಗೆ ಮಹೂರ್ತ ಫಿಕ್ಸ್,ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

ZP TP elections-ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿಗಳಿಗೆ ಚುನಾವಣೆಗೆ ಮಹೂರ್ತ ಫಿಕ್ಸ್
ZP TP elections-ಮುಂಬರುವಂತ ಮೇ ಅಂತ್ಯದಲ್ಲಿ ಮೀಸಲಾತಿ ಪಟ್ಟಿ ನೀಡಲಾಗುತ್ತದೆ. ಜೂನ್, ಜುಲೈ ನಲ್ಲಿ ಜಿಲ್ಲಾ(ZP) ಮತ್ತು ತಾಲ್ಲೂಕು ಪಂಚಾಯ್ತಿಗಳಿಗೆ(TP) ಚುನಾವಣೆ ನಡೆಸಬಹುದಾಗಿ ಅಂತ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಈ ಸಂಬಂಧ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು.ಈ ವೇಳೆ ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಅಂತ್ಯಕ್ಕೆ ಮೀಸಲಾತಿ ಪಟ್ಟಿಯನ್ನು ನೀಡಲಾಗುತ್ತದೆ. ಆ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯ್ತಿಗಳಿಗೆ ಚುನಾವಣೆ(ZP TP elections) ನಡೆಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

ಇಂದು ಮೂರು ವರ್ಷಗಳಾದರೂ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸದೇ ಇರುವ ಸಂಬಂಧ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ವೇಳೆಯಲ್ಲಿ ಈ ಮಾಹಿತಿಯನ್ನು ಅಡ್ವೋಕೇಟ್ ಜನರಲ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಎನ್.ಕೆ ಫಣೀಂದ್ರ ಅವರು ಸರ್ಕಾರವು ಮೀಸಲಾತಿ ಪಟ್ಟಿಯನ್ನು ನೀಡಿದರೇ ವೇಳಾಪಟ್ಟಿ ಪ್ರಕಟಿಸಲು ರೆಡಿ ಇರೋದಾಗಿ ಹೇಳಿದರು.

ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಜೂನ್ ಅಥವಾ ಜುಲೈನಲ್ಲಿ ಚುನಾವಣಾ ಆಯೋಗವು ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆಸಬಹುದು ಎಂಬುದಾಗಿ ಎಜಿ ಹೈಕೋರ್ಟ್ ಗೆ ತಿಳಿಸಿದರು.

Voter list-ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ceo.karnataka.gov.in/draftroll_2023

sreelakshmisai
Author

sreelakshmisai

Leave a Reply

Your email address will not be published. Required fields are marked *